Wednesday, September 16, 2026

BDA Apartments

ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ- ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ವ...
Home Front Page ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ- ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ವಾಗ್ದಾಳಿ….

ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ- ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ವಾಗ್ದಾಳಿ….

ಮೈಸೂರು,ಫೆಬ್ರವರಿ,16,2021(www.justkannada.in): ಉಚಿತ ನಾಟಕ ತೋರಿಸುವುದು ಸಿದ್ದರಾಮಯ್ಯ ಅಕ್ಕಿಕೊಟ್ಟಂತೆ ಎಂಬ ಹೇಳಿಕೆ ವಿಚಾರ ಕುರಿತು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್, ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.jk

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್, ಬಡವರು ತಿನ್ನುವ ಅನ್ನಕ್ಕೂ ಬಿಜೆಪಿಯವರು ಕೇಸರಿ ಬಣ್ಣ ಬಳಿಯುವ ಕೆಲಸ ಮಾಡ್ತಿದ್ದಾರೆ. ನೀವು ಅಕ್ಕಿ ಬೆಳೆಯುವವರನ್ನು ಸಹಿಸಲ್ಲ, ಉಚಿತ ಅಕ್ಕಿ ಕೊಡುವವರನ್ನು ಸಹಿಸಲ್ಲ. ಕಾರ್ಯಪ್ಪ ನಿಮ್ಮ ವ್ಯಾಪ್ತಿಯಲ್ಲಿ ಏನಿದೆ ಅದನ್ನು ಮಾತ್ರ ಮಾಡಿ. ಮೈಸೂರಿನಲ್ಲಿ ನಿಮ್ಮ ಅಡ್ಡಕಸವಿತನ ತೋರಬೇಡಿ ಎಂದು ಹರಿಹಾಯ್ದರು.dont-look-your-crossover-mysore-addanda-karyappa-kpcc-spokesperson-m-lakshan

ಕಾರ್ಯಪ್ಪ ಬಂದಾಗಿಂದ ರಂಗಾಯಣದಲ್ಲಿ ಬಿಜೆಪಿ, ಆರ್ ಎಸ್ ಎಸ್ ಅಜೆಂಡಾ ಹೇರುತ್ತಿದ್ದಾರೆ. ಸಿದ್ದರಾಮಯ್ಯ ತಂದ ಅನ್ನಭಾಗ್ಯ ಯೋಜನೆಯಿಂದ ಒಂದುವರೆ ಕೋಟಿ ಜನ ಹೊಟ್ಟೆತುಂಬಿಸಿಕೊಂಡಿದ್ದಾರೆ. ಆದರೆ ಮೋದಿ ಮಾಡಿದ ಲಾಕ್ಡೌನ್ ಸಂದರ್ಭದಲ್ಲಿ ಹಸಿವಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಬಡವರ ಬಗ್ಗೆ ಟೀಕಿಸಿ ಸಂತೋಷ ಪಡುವ ಕೊಳಕು ಮನಸ್ಥಿತಿ ನಿಮ್ಮದ್ದು ಎಂದು ಅಡ್ಡಂಡ ಕಾರ್ಯಪ್ಪ ವಿರುದ್ಧ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

Key words: Don’t -look – your crossover – Mysore-addanda karyappa-KPCC spokesperson -M Lakshan