Friday, September 18, 2026

BDA Apartments

ಬಂಡೀಪುರವನ್ನೂ ಅದಾನಿಗೆ ಮಾರಬೇಡಿ: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ BDA JK_Adv BDA Adv
Home Front Page ಬಂಡೀಪುರವನ್ನೂ ಅದಾನಿಗೆ ಮಾರಬೇಡಿ: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

ಬಂಡೀಪುರವನ್ನೂ ಅದಾನಿಗೆ ಮಾರಬೇಡಿ: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

ಮೈಸೂರು, ಏಪ್ರಿಲ್ 09, 2023 (www.justkannada.in): ಬಂಡೀಪುರವನ್ನು ಅದಾನಿಗೆ ಮಾರಬೇಡಿ ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.  ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

50 ವರ್ಷಗಳ ಹಿಂದೆ ಬಂಡಿಪುರದಲ್ಲಿ ಆರಂಭಿಸಿದ ಹುಲಿ ಯೋಜನೆಗೆ ಪ್ರಧಾನಿ ಮೋದಿ ಅವರು ಇಂದು ಸಂಪೂರ್ಣ ಶ್ರೇಯಸ್ಸು ಪಡೆದುಕೊಳ್ಳಲಿದ್ದಾರೆ. ಅವರು ಅದ್ಭುತ ವೀಕ್ಷಣೆಯ ಅನುಭವ ಪಡೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬಂಡಿಪುರ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಕಾಂಗ್ರೆಸ್ ಸರ್ಕಾರ ಪರಿಚಯಿಸಿತ್ತು ಎಂದಿರುವ ಪಕ್ಷ, ರಾಷ್ಟ್ರೀಯ ಸಂಪತ್ತನ್ನು ಉದ್ಯಮಿ ಗೌತಮ್ ಅದಾನಿ ಅವರಿಗೆ ಮಾರಾಟ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.