ಕರ್ನಾಟಕದಲ್ಲೂ ಮುಂದೆ ಡಬಲ್ ಎಂಜಿನ್ ಸರಕಾರ ಅಧಿಕಾರಕ್ಕೆ: ಪ್ರಹ್ಲಾದ್ ಜೋಶಿ

ಬೆಂಗಳೂರು, ಡಿಸೆಂಬರ್ 11, 2022 (www.justkannada.in): ಕರ್ನಾಟಕ ವಿಧಾನ ಸಭೆ ಚುನಾವಣೆ ಮೇಲೂ ಗುಜರಾತ್ ಚುನಾವಣೆ ಫಲಿತಾಂಶ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ವಿಧಾನ ಸಭೆ ಚುನಾವಣೆ ಮೇಲೂ ಗುಜರಾತ್ ಚುನಾವಣೆ ಫಲಿತಾಂಶ ಪರಿಣಾಮ ಬೀರಲಿದೆ ಎಂದಿದ್ದಾರೆ.

ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲೂ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಇಷ್ಟೊಂದು ಸಂಖ್ಯೆಯ ಸ್ಥಾನ ಗಳಿಸಿರೋದು ಡಬಲ್ ಇಂಜಿನ್ ಸರ್ಕಾರಗಳ ಬಗ್ಗೆ ಜನರು ವಿಶ್ವಾಸ ಇಟ್ಟಿರೋದನ್ನು ತೋರಿಸುತ್ತದೆ ಎಂದಿದ್ದಾರೆ.