ಇವಿಎಂ ಮೇಲೆ  ಅನುಮಾನ: ಬಿಜೆಪಿ ವಿರುದ್ಧ ಹೋರಾಟಕ್ಕೆ ಮಮತಾ ಬ್ಯಾನರ್ಜಿ ಕರೆ.

ನವದೆಹಲಿ,ಮಾರ್ಚ್,11,2022(www.justkannada.in): ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಫಲಿತಾಂಶ ಸಂಬಂಧ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಎಫ್ ಎಸ್ ಎಲ್ ಪರೀಕ್ಷೆಗೆ  ಒತ್ತಾಯಿಸಿದ್ದಾರೆ.

ಫಲಿತಾಂಶ ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ , ಬಿಜೆಪಿ ವಿರುದ್ಧ ಹೋರಾಡಲು  ಕಾಂಗ್ರಸ್ಸೇತರ ಪಕ್ಷಗಳು ಒಗ್ಗಟ್ಟಾಗಬೇಕು. ಎಲ್ಲಾ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ.

ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ. ಕಾಂಗ್ರೆಸ್ ಮೇಲೆ ನಾವು ಅವಲಂಬನೆಯಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಬಯಸಿದರೆ, 2024ರ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬಹುದು ಎಂದು  ಹೇಳಿದರು.

Key words: Doubt-EVM-Mamatha Banerjee