ಡಾ. ಬಿ.ಆರ್ ಅಂಬೇಡ್ಕರ್ ಗೆ ಅಪಮಾನ ಆರೋಪ: ಸಚಿವ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು,ನ,16,2019(www.justkannada.in): ಸಾರ್ವಜನಿಕ ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ. ಡಾ.ಆರ್ ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹವಾಗಿ ಉಲ್ಲೇಖಿಸಿ ಅಪಮಾನ ಮಾಡಲಾಗಿದೆ. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಅವರನ್ನ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ಸೇನೆ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ  ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ  ಧರಣಿ ನಡೆಯಿತು.  ಸಾರ್ವಜನಿಕ ಶಿಕ್ಷಣ ಇಲಾಖೆ ನವೆಂಬರ್ 26ನ್ನ  ಸಂವಿಧಾನ ದಿನವನ್ನಾಗಿ ಘೋಷಿಸಿ ಸುತ್ತೋಲೆ ಹೊರಡಿಸಿದೆ. ಆದರೆ ಸಂವಿಧಾನ ಕುರಿತ ಕೈಪಿಡಿಯಲ್ಲಿ ಸಂವಿಧಾನವನ್ನು ಕೇವಲ ಅಂಬೇಡ್ಕರ್ ಬರೆದಿಲ್ಲ ಎಂದು ಸಂದೇಶ ನೀಡುವ ಮೂಲಕ ಬಾಬಾ ಸಾಹೇಬರಿಗೆ ಅಪಮಾನ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಜೆಪಿ ಸರ್ಕಾರ ಬಾಬಾ ಸಾಹೇಬರಿಗೆ ಉದ್ದೇಶ ಪೂರ್ವಕವಾಗಿ ಅಪಮಾನಿಸಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡಬೇಕು ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು ಎಂದು ಪ್ರತಿಭಟನೆ ವೆಳೆ ಸಂಘಟನೆಯ ಮುಖಂಡರು ಒತ್ತಾಯಿಸಿದರು.

Key words: Dr. BR Ambedkar  – Minister – Suresh Kumar –  Education Department-  secretary – protests-mysore