ಲೋಕಸಭೆ ಚುನಾವಣೆಯಲ್ಲಿ ಡಾ.ಸಿ.ಎನ್ ಮಂಜುನಾಥ್ ಸ್ಪರ್ಧೆ ವಿಚಾರ: ಮಾಜಿ  ಪ್ರಧಾನಿ ಹೆಚ್.ಡಿ ದೇವಗೌಡರ ಅಭಿಪ್ರಾಯವೇನು..?

ಬೆಂಗಳೂರು,ಮಾರ್ಚ್​,4,2024(www.justkannada.in): ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸುದ್ದಿಗಳು ಹರಡಿದ್ದು ಸ್ವತಃ ಸಿಎನ್ ಮಂಜುನಾಥ್ ಅವರೇ ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ  ಮಾಜಿ ಪ್ರಧಾನಿ, ಎಚ್​ಡಿ ದೇವೇಗೌಡರು, ಮಂಜುನಾಥ್ ಅವರು ರಾಜಕೀಯಕ್ಕೆ ಬರುವುದು ಬೇಡ ಎನ್ನುವ ಮಾತುಗಳನ್ನಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡ, ಇಡೀ ದೇಶಾದ್ಯಂತ ಮಂಜುನಾಥ್ ತಮ್ಮದೇ ಆದ ಹೆಸರು ಮಾಡಿದ್ದಾರೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂತಹವರು ಬರುವುದು ಸರಿಯಲ್ಲ. ಈ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಎಂದು ಒತ್ತಾಯಿಸಲ್ಲ. ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ. ಅವರು ರಾಜಕೀಯಕ್ಕೆ ಬರುವುದಕ್ಕೆ ಸಮ್ಮತಿ ಸೂಚಿಸಲ್ಲ ಎಂದು ಹೇಳಿದ್ದಾರೆ.

ಇನ್ನು ಲೋಕಸಭೆ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು,  ಹೆಚ್.ಡಿಕೆ ಸ್ಪರ್ಧೆ ಬಗ್ಗೆ  ಮೋದಿ ನಿರ್ಧಾರ ಮಾಡ್ತಾರೆ. ಇನ್ನೊಂದು ವಾರದಲ್ಲಿ ಸೀಟು ಹಂಚಿಕೆಯಾಗಲಿದೆ ಎಂದು ತಿಳಿಸಿದರು.

Key words: Dr. CN Manjunath – Lok Sabha- elections- opinion – HD Deve Gowda