ಬೆಂಗಳೂರು,ಮೇ,8,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯಿಂದ ಉಗ್ರರ ನೆಲೆ ಮೇಲೆ ಕ್ಷಿಪಣಿ ದಾಳಿ ನಂತರ ಭಾರತ ಮತ್ತು ಪಾಕಿಸ್ಥಾನದ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಭದ್ರತೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರಾಜ್ಯದಲ್ಲೂ ಕಟ್ಟುನಿಟ್ಟಿನ ಭದ್ರತೆ ವಹಿಸಲಾಗಿದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದ ಹಲವು ಸ್ಥಳಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಭದ್ರತೆಗಾಗಿ ಸ್ಪೆಷಲ್ ಫೋರ್ಸ್ ಸಿಬ್ಬಂದಿ ಬಳಕೆ ಮಾಡಲಾಗಿದೆ. ರಾಯಚೂರು ಕೈಗಾ, ಕೆಆರ್ ಎಸ್ ನಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದರು.
ಭದ್ರತೆಗೆ ನಿಯೋಜಿಸಿದ ಸಿಬ್ಬಂದಿಗೆ ಕಮಾಂಡೋ ತರಬೇತಿ ಆಗಿದೆ. ನಮ್ಮಲ್ಲಿ ಭದ್ರತೆಗೆ ಅಗತ್ಯ ಹೆಚ್ಚಿನ ಸಿಬ್ಬಂದಿ ಇದ್ದಾರೆ. ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
Key words: Security, increased, state, Home Minister, Dr. G. Parameshwar