Wednesday, August 12, 2026

BDA Apartments

Home Front Page ನೂತನ ಸಚಿವರಾಗಿ ಡಾ.ಜಿ.ಪರಮೇಶ್ವರ್ , ಕೆ.ಎಚ್ ಮುನಿಯಪ್ಪ ಸೇರಿ 8 ಶಾಸಕರು ಪ್ರಮಾಣ ವಚನ ಸ್ವೀಕಾರ.

ನೂತನ ಸಚಿವರಾಗಿ ಡಾ.ಜಿ.ಪರಮೇಶ್ವರ್ , ಕೆ.ಎಚ್ ಮುನಿಯಪ್ಪ ಸೇರಿ 8 ಶಾಸಕರು ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಮೇ,20,2023(www.justkannada.in) ರಾಜ್ಯದ ನೂತನ ಸಿಎಂ ಆಗಿ ಸಿದ್ಧರಾಮಯ್ಯ ಮತ್ತು ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಬಳಿಕ 8 ಶಾಸಕರು ನೂತನ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರಾದ ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್​ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ನೂತನ ಸಿಎಂ ಸಿದ್ಧರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ,  ಕೆಸಿ ವೇಣುಗೋಪಾಲ್,  ನಟ ಕಮಲ್ ಹಾಸನ್, ಬಿಹಾರ ಸಿಎಂ ನಿತೀಶ್ ಕುಮಾರ್  ,ಪುದುಚೇರಿ ಮಾಜಿಸಿಎಂ ನಾರಾಯಣಸ್ವಾಮಿ, ಶರದ್ ಪವಾರ್,  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ​ಕುಮಾರ್​​, ಗೀತಾ ಶಿವರಾಜ್​ ಕುಮಾರ್​​, , ದುನಿಯಾ ವಿಜಯ್​ ಭಾಗಿಯಾಗಿದ್ದರು.

Key words: Dr. G. Parameshwar- KH Muniappa -d 8 MLAs- took -oath – new ministers.