Saturday, October 10, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ಮಂಗಳೂರು, ಜುಲೈ,7,2026 (www.justkannada.in) : ತೂಗು ಸೇತುವೆಗಳ ಸರದಾರ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ.

ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಇಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅರಂಬೂರಿನ ನಿವಾಸಿಯಾಗಿರುವ ಇವರು  ಗ್ರಾಮೀಣ ದುರ್ಗಮ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಸೇತುವೆ ನಿರ್ಮಿಸಿದ್ರು. 1989ರಲ್ಲಿ ತಮ್ಮ ಸ್ವಗ್ರಾಮವಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಐತಿಹಾಸಿಕ ಪಯಣವನ್ನು ಆರಂಭಿಸಿದರು.ತೂಗು ಸೇತುವೆಗಳ ಸರದಾರ girish baradwaj

ದುರ್ಗಮ ಕಾಡುಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ನೂರಾರು ಪ್ರದೇಶಗಳಿಗೆ ಗಿರೀಶ್ ಅವರ ತೂಗು ಸೇತುವೆಗಳು ಜೀವನಾಡಿಯಾದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇವರ ಈ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2017 ರಲ್ಲಿ ಪದ್ಮಶ್ರೀ ನೀಡಿ ಗೌರವಿಸಿತ್ತು.ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ jk02_new jk02 new

Key words: Padma Shri, Awardee, Dr. Girish Bhardwaj, Passes Away