Thursday, September 24, 2026

BDA Apartments

Home Front Page ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜ್ಞಾನ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳೂ ಆಗಿರುವವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಹಾಲಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೂತನ ಕುಲಪತಿಯನ್ನು ನೇಮಕ ಮಾಡಲಾಗಿದೆ.

ಡಾ. ಜ್ಞಾನ ಪ್ರಕಾಶ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಹಲವು ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನೆ, ಬೋಧನೆ ಹಾಗೂ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಇದೀಗ ಅವರಿಗೆ ಕೆಎಸ್‌ಒಯು ಕುಲಪತಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ ksou

ಮುಕ್ತ ಹಾಗೂ ದೂರ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಕೆಎಸ್‌ ಒಯು, ರಾಜ್ಯದ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಾ. ಜ್ಞಾನ ಪ್ರಕಾಶ್ ಅವರ ನೇತೃತ್ವದಲ್ಲಿ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಗುಣಮಟ್ಟ ಹೆಚ್ಚಳ, ನೂತನ ಶಿಕ್ಷಣ ನೀತಿ (NEP) ಅನುಷ್ಠಾನ, ಡಿಜಿಟಲ್ ಶಿಕ್ಷಣ ವ್ಯವಸ್ಥೆಯ ಬಲವರ್ಧನೆ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ವ್ಯಕ್ತವಾಗಿದೆ.ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ jk02_new jk02 new

Key words: Dr. Gnana Prakash, appointed, new VC, KSOU