Thursday, August 13, 2026

BDA Apartments

Home Crime ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ. ಹೆಚ್.ಸಿ.ಮಹದೇವಪ್ಪ

ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ. ಹೆಚ್.ಸಿ.ಮಹದೇವಪ್ಪ

ಮೈಸೂರು,ಮೇ, 22, 2024 (www.justkannada.in):  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌.

ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ತಲಾ ಮೂರು ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಸ್ಥಳದಲ್ಲಿಯೇ ಘೋಷಿಸಿದರು. ಈ ಸಂದರ್ಭದಲ್ಲಿ  ಮುಡಾ ಅಧ್ಯಕ್ಷ ಮರಿಗೌಡ ಅವರು ಸೇರಿದಂತೆ ಮುಂತಾದವರು ಇದ್ದರು.

Key words: Dr.HC Mahadevappa, condoled, family, gas, leak