ಜ.29 ರಂದು ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ.

ಮೈಸೂರು, ಜನವರಿ, 23,2023(www.justkannada.in): ಜನವರಿ 29 ರಂದು ನಟ ದಿ.ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾಗಲಿದೆ ಎಂದು ವಿಷ್ಣು ಸೇನಾ ಸಂಘಟನೆ ಅಧ್ಯಕ್ಷ ರಾಜು ಗೌಡ ಹೇಳಿದರು.

ಮೈಸೂರಿನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾನಾಡಿದ ರಾಜುಗೌಡ,  ಮೈಸೂರು ಹೆಚ್.ಡಿ ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕವನ್ನ ಜನವರಿ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಇದು ಎಲ್ಲಾ ವಿಷ್ಣು ಅಭಿಮಾನಿಗಳಿಗೆ ಸಂತಸದ ವಿಚಾರ ಎಂದರು.

ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣುವರ್ಧನ್ ಸಮಾಧಿ ತೆರವು ವಿಚಾರ ಕುರಿತು ಮಾತನಾಡಿದ ರಾಜುಗೌಡ, ವಿಷ್ಣು ಸಮಾಧಿ ಸ್ಥಳಕ್ಕೂ ಅಭಿಮಾನಿಗಳಿಗೂ ಭಾವನಾತ್ಮಕ ಸಂಬಂಧವಿದೆ. ಅದನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ. ಈಗಾಗಲೇ ಈ ಪ್ರಕರಣ ಹೈಕೋರ್ಟ್ ನಲ್ಲಿದೆ. ಹೈಕೋರ್ಟ್ ನಲ್ಲಿ ನ್ಯಾಯ ಸಿಗದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದರು.

Key words: Dr. Vishnuvardhan -memorial – Mysore – January 29.