ಮೈಸೂರು,ಸೆಪ್ಟಂಬರ್,1,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.
ಇಂದು ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ ಬಳಿಕ ಇಂದು ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ.
Key words: CM Siddaramaiah, welcomed, President ,Draupadi Murmu, Mysore