ಕುಡಿಯುವ ನೀರಿನ ಸಮಸ್ಯೆ , ಕೆರೆಯಲ್ಲಿ ಹೂಳು ತುಂಬಿದೆ: ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ- ಮಾಜಿ ಸಿಎಂ ಬಿಎಸ್ ವೈ ಕಿಡಿ.

ಬೆಂಗಳೂರು,ನವೆಂಬರ್,11,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದರು.

ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಈಗ ತಾನೇ ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸ ನೋಡಿದ್ದೇವೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಶಿವಕುಮಾರ್ ಅವರನ್ನ ಪ್ರಶ್ನಿಸುತ್ತೇನೆ. ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ಧಿ ಆಗಿದೆ ಅಂತ ಇಲ್ಲಿನ ಜನ ಹೇಳುತ್ತಿದ್ದಾರೆ ಎಂದರು.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬ್ರಾಂಡ್ ಬೆಂಗಳೂರು ಕುರಿತು  ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಸುಮ್ಮನೆ ಮಾತನಾಡುವುದಲ್ಲ. ವಾಸ್ತವ ವಿಚಾರ ಮಾತಾಡಬೇಕು. ಬನ್ನಿ ಜನರ ಮಧ್ಯದಲ್ಲಿ ಕುಳಿತು  ಚರ್ಚಿಸೋಣ ಎಂದು ಆಹ್ವಾನ ನೀಡಿದರು.

Key words: Drinking water –problem-bangalore-former CM- BSY