ಕುಡಿಯುವ ನೀರಿನ ಸಮಸ್ಯೆ: ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಸಿದ್ಧರಾಮಯ್ಯ ಸೂಚನೆ.

ಬೆಂಗಳೂರು, ಜೂನ್,9,2023(www.justkannada.in):  ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಿಎಂ ಸಿದ‍್ಧರಾಮಯ್ಯ, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನ ನೀಡಿದ್ದಾರೆ.

ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ENGLISH SUMMARY..

CM directs officials to work on war foot to resolve water problem
Bengaluru, June 9-
Chief Minister Siddaramaiah today held discussions about resolving water problem in various parts of the State.
He directed officials to ensure that there should be no scarcity of drinking water and appropriate measures to be taken in this regard, following the instructions given last week itself.
He added that he will hold a meeting with district level officdrs in this regard.

CM sought information about the reported incidents of deaths due to drinking contaminated water in Koppal during the meeting.

Key words: Drinking-water-problem-CM Siddaramaiah- instructed-officers