ರಾಜ್ಯದ 196 ತಾಲ್ಲೂಕುಗಳಲ್ಲಿ ಬರ: ರೈತರ ಬೆನ್ನಿಗೆ ನಿಲ್ಲುವ ಏಕೈಕ ಸಮರ್ಥ ನಾಯಕ ಸಿದ್ದರಾಮಯ್ಯ- ಸಚಿವ ಚಲುವರಾಯಸ್ವಾಮಿ ನುಡಿ.

ಧಾರವಾಡ, ಸೆಪ್ಟೆಂಬರ್​ 9,2023(www.justkannada.in) ರಾಜ್ಯದ 196 ತಾಲ್ಲೂಕುಗಳಲ್ಲಿ ಬರ ಇದ್ದು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇವೆ. ಬರ ಘೋಷಣೆ ಕುರಿತು ಶೀಘ್ರದಲ್ಲೇ ಸಭೆ ನಡೆಯಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಧಾರವಾಡದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕೃಷಿಮೇಳದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, 62 ತಾಲೂಕುಗಳನ್ನು ಬರ ಎಂದು ಘೋಷಣೆಗೆ ಅವಕಾಶವಿತ್ತು. ಆದರೆ ಇನ್ನೂ 130 ತಾಲೂಕುಗಳನ್ನು ಸೇರಿಸಲು ಮುಂದಾಗಿದ್ದೇವೆ. ರಾಜ್ಯದ 196 ತಾಲೂಕುಗಳಲ್ಲಿ ಬರ ಇದೆ. ಬರ ಘೋಷಣೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಮಾರ್ಗಸೂಚಿಯಲ್ಲಿ ಬದಲಾವಣೆ ಕೇಳಿದ್ದೇವೆ. ಎರಡು ಮೂರು ಬಾರಿ ಕೇಳಿದರೂ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿಲ್ಲ ಎಂದರು.

ರೈತರ ಬೆನ್ನಿಗೆ ನಿಲ್ಲುವ ಏಕೈಕ ಸಮರ್ಥ ನಾಯಕ ಸಿದ್ದರಾಮಯ್ಯ

ಇದೇ ವೇಳೆ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ಸಚಿವ ಚಲುವರಾಯಸ್ವಾಮಿ, ಸಿಎಂ ಸಿದ್ಧರಾಮಯ್ಯ ಅವರು ರೈತರ ಬೆನ್ನಿಗೆ ನಿಲ್ಲುವ ಏಕೈಕ ಸಮರ್ಥ ನಾಯಕ. ರೈತರಿಗೆ ಸಾಕಷ್ಟು ಸಮಸ್ಯೆ, ನೋವು ಇದೆ, ಸವಾಲುಗಳು ಇವೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರೈತರಿಗೆ ನೆರವಾಗಿದ್ದರು. ಈ ಹಿಂದೆ ರಾಜ್ಯ ರೈತರ ಸಾಲಮನ್ನಾ ಮಾಡಿದ್ದರು. ಹಾಲಿನ ಸಬ್ಸಿಡಿ 5 ರೂ.ಗೆ ಏರಿಸಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲಬೇಕು ಎಂದರು.

Key words: Drought -196 taluks – state-  Minister -Chaluvarayaswamy