ಬರ ಪರಿಸ್ಥಿತಿ: ನಾಳೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ ,ಪರಿಶೀಲನೆ.

ಬೆಂಗಳೂರು, ಅಕ್ಟೋಬರ್​,4,2023(www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಬರಗಾಲದ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ನಾಳೆಯಿಂದ ಅಕ್ಟೋಬರ್ 9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ನಾಳೆ ಪ್ರವಾಸಕ್ಕೂ ಮುನ್ನ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆತಯಾಗಿ ಬರ ಪರಿಸ್ಥಿತಿ ಎದುರಾಗಿದ್ದು ರಾಜ್ಯ ಸರ್ಕಾರ ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದೆ. ಕೇಂದ್ರದ ಬಳಿ 6 ಸಾವಿರ ಕೋಟಿ ರೂ. ಪರಿಹಾರವನ್ನು ಕೇಳಿದೆ.

 

Key words: Drought-Central team- will -visit – state –tomorrow