ರಾಜ್ಯದಲ್ಲಿ ಬರಪರಿಸ್ಥಿತಿ: ಕೂಡಲೇ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ.

ಬೆಂಗಳೂರು,ಆಗಸ್ಟ್,8,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಬರಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ಬರಪೀಡಿದ ಪ್ರದೇಶಗಳನ್ನ ಘೋಷಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿಎಸ್ ವೈ,  ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

Key words: Drought -situation – state-Former CM -BSY – government – immediate action.