ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್ ಬಂಧನ: 1 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರ ವಶಕ್ಕೆ.

ಬೆಂಗಳೂರು,,ಮೇ,1,2023(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರುತ್ತಿದ್ದ ಓರ್ವ ಆರೋಪಿಯನ್ನ ಬಂಧಿಸಿ 1 ಕೋಟಿ ರೂ. ಮೌಲ್ಯದ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.

ತನ್ವೀರ್ ಬಂಧಿತ ಡ್ರಗ್ಸ್ ಪೆಡ್ಲರ್. ಈತನ ಬಳಿ ಇದ್ದ 1 ಕೋಟಿ ರೂ ಮೌಲ್ಯದ 250 ಕೆಜಿ ಗಾಂಜಾವನ್ನ ಡಿ.ಜೆ ಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿ.ಜೆ ಹಳ್ಳಿಯಲ್ಲಿ ಯುವಕರಿಗೆ ತನ್ವೀರ್ ಗಾಂಜಾ ಮಾರುತ್ತಿದ್ದ. ಇದೀಗ ಈತನನ್ನ ಬಂಧಿಸಲಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: Drug peddler -arrested – Bangalore-1 Crore Rs. – ganja -seized