ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…

ಬೆಂಗಳೂರು,ಸೆಪ್ಟಂಬರ್,14,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ. jk-logo-justkannada-logo

ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ  ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜತೆಗೆ, ಇತರ ಆರೋಪಿಗಳಾದ ಶಿವಪ್ರಕಾಶ್,ರಾಹುಲ್ ,ವೈಭವ್ ಜೈನ್ ,ವಿನಯ್ ಕುಮಾರ್ ಅವರು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.drugs-case-actress-raginis-bail-application-hearing-postpone

ಇದೀಗ ಈ ಅರ್ಜಿ ವಿಚಾರಣೆಯನ್ನು  ಎನ್ ಡಿಪಿಎಸ್  ನ್ಯಾಯಾಲಯ ಸೆಪ್ಟಂಬರ್ 16ಕ್ಕೆ ಮುಂದೂಡಿದೆ. ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಸಿಸಿಬಿ ಪರ ವಕೀಲರುಮ ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಮನವಿ ಮಾಡಿಕೊಂಡರು. ಆರೋಪಿಗಳು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ತಮಗೆ ಅವಕಾಶ ನೀಡಬೇಕು ಎಂದು ಅವರು ಮನವಿ ಸಲ್ಲಿಸಿದರು. ವಿಚಾರಣೆಯನ್ನು 16ಕ್ಕೆ ಮುಂದೂಡಿದ ಕೋರ್ಟ್  ಅಂದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ  ಸೂಚಿಸಿತು.

Key words: drugs case- actress -Ragini’s- bail application-hearing-Postpone