ಡ್ರಗ್ಸ್ ಹಣದಿಂದ ಸಮ್ಮಿಶ್ರ ಸರ್ಕಾರ ಬೀಳಿಸಿದ ಆರೋಪ: ಮಾಜಿ ಸಿಎಂ ಹೆಚ್.ಡಿಕೆಗೆ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು…

ಮೈಸೂರು,ಸೆಪ್ಟಂಬರ್,5,2020(www.justkannada.in):  ಡ್ರಗ್ಸ್ ಹಣದಿಂದಲೇ ಸಮ್ಮಿಶ್ರ ಸರ್ಕಾರವನ್ನ ಬೀಳಿಸಲಾಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.jk-logo-justkannada-logo

ಡ್ರಗ್ಸ್ ಹಣದಿಂದ ಸರ್ಕಾರ ಬೀಳಿಸುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ. ಹೆಚ್.ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡ್ರಗ್ಸ್ ದಂಧೆ ತಡೆಗಟ್ಟಬಹುದಿತ್ತು. ಆಗ ಸುಮ್ಮನಿದ್ದು ಈಗ ಮಾತನಾಡಿದರೇ ಹೇಗೆ..? ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.drugs-money-coalition-government-minister-st-somashekhar-hd-kumaraswamy

ಡ್ರಗ್ಸ್ ಧಂಧೆಯಿಂದ ಬಂದ ಹಣದಿಂದಲೇ ಹಿಂದಿನ‌ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನ ಮಾಡಿದ್ದರು ಎಂದು ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದರು.

Key words: Drugs – money-coalition government – minister-ST Somashekhar – HD Kumaraswamy