ಬೆಂಗಳೂರು,ಮಾರ್ಚ್,3,2026 (www.justkannada.in): ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25) ಬಂಧಿತರು. ಇವರು ಪೆಡ್ಲಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು. ಈ ನಡುವೆ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ‘ಪ್ರೆಸ್ಟೀಜ್ ಫೈನ್ ಬೇರಿ ಪಾರ್ಕ್’ ಅಪಾರ್ಟ್‌ಮೆಂಟ್ ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಕಾರ್ಯಾಚರಣೆಯ ವೇಳೆ ಭಾರಿ ಪ್ರಮಾಣದ ಎಲ್‌ಎಸ್ಡಿ (LSD), ಹೈಡ್ರೋ ಗಾಂಜಾ ಮತ್ತು ಚರಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ.
Key words: CCB, police, Drugs worth, Rs 10 crore, seized, two arrested







