ಡ್ರಗ್ಸ್ ಮಾಫಿಯಾ ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ

ಬೆಂಗಳೂರು,ಸೆಪ್ಟೆಂಬರ್, 28,2020(www.justkannada.in) : ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ಎನ್ ಡಿ ಪಿ ಎಸ್ ನ್ಯಾಯಾಲಯವು ವಜಾಗೊಳಿಸಿದೆ.jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿ ಅವರು ಬೇಲ್ ಗೆ ಅರ್ಜಿ ಸಲ್ಲಿಸಿದರು.

ಇದಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿದರೆ ಮತ್ತೆ ಅದೇ ಕೃತ್ಯ ಮುಂದೂವರಿಸಬಹುದು. ಹೀಗಾಗಿ, ಜಾಮೀನು ಅರ್ಜಿ ವಜಾಗೊಳಿಸುವಂತೆ ಸಿಸಿಬಿ ಪೊಲೀಸರು ಮನವಿ ಮಾಡಿದ ಹಿನ್ನೆಲೆ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

ರಾಗಿಣಿ ಸೆ.14ರಂದು ಸಂಜನಾ ಸೆ.16ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಎನ್ ಡಿ ಪಿ ಎಸ್ ಕೋರ್ಟ್ ಜಡ್ಜ್ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

key words : Drugs-mafia-actress-Ragini-Sanjana-dismissed-bail-application