ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠ ವಿವಾದಕ್ಕೆ ಮುಕ್ತಿ : ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು,ಡಿಸೆಂಬರ್,27,2020(www.justkannada.in) : ನಮ್ಮ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠದ ವಿವಾದಕ್ಕೆ ಮುಕ್ತಿ ಸಿಗಲಿದೆ. ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣ ವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.Teachers,solve,problems,Government,bound,Minister,R.Ashokಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯಲಿರುವ ದತ್ತಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.  ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿವೆ. ಈ ಬಗ್ಗೆ ನಮ್ಮ ಕಾನೂನು ತಜ್ಞರು ಪರಿಶೀಲನೆ ಮಾಡುತ್ತಿದ್ದಾರೆ. ರಾಮಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗಲಿದೆ ಎಂದು ಹೇಳಿದರು.

ಜಗತ್ತಿನಲ್ಲಿ ದತ್ತಭಕ್ತರಿದ್ದಾರೆ, ದತ್ತಪಾದುಕೆ ಇರುವುದು ಚಿಕ್ಕಮಗಳೂರಿನಲ್ಲಿ. ದತ್ತಪೀಠ ನಮ್ಮದಾಗಬೇಕು ಎಂಬುದು ಸಂಕಲ್ಪವಾಗಿದೆ. ಮುಂದಿನ ದಿನದಲ್ಲಿ ದತ್ತಪೀಠ ನಮ್ಮದಾಗುವ ವಿಶ್ವಾಸವಿದೆ ಎಂದರು.During-BJP-government-Freedom-controversy-bench-MP Shobha Karandlaje

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ಯಾಮಲ ಕುಂದೂರು, ಚಿತ್ರನಟಿ ತಾರ ಮುಂತಾದವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

key words : During-BJP-government-Freedom-controversy-bench-MP Shobha Karandlaje