ಕರ್ತವ್ಯದ ವೇಳೆ ಕುಸಿದು ಬಿದ್ದು ಪೌರಕಾರ್ಮಿಕ ಸಾವು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ನವೆಂಬರ್,4,2021(www.justkannada.in): ಕರ್ತವ್ಯದ ವೇಳೆ ಕುಸಿದು ಬಿದ್ದು ಪೌರಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ  ನಡೆದಿದೆ.

ಮುರುಗೇಶ್ (40) ಮೃತ ಪೌರಕಾರ್ಮಿಕ. ಪತ್ನಿ, ಇಬ್ಬರು ಮಕ್ಕಳನ್ನು ಮುರುಗೇಶ್ ಅಗಲಿದ್ದು,  ನೇರ ನೇಮಕಾತಿ ಮೂಲಕ ಪೌರಕಾರ್ಮಿಕನಾಗಿ ಮುರುಗೇಶ್ ಆಯ್ಕೆಯಾಗಿದ್ದರು. ಹುಣಸೂರು ನಗರಸಭೆಯಲ್ಲಿ ಹದಿನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಇನ್ನು ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಹುಣಸೂರು ನಗರಸಭೆ ಮುಂಭಾಗ ಮೃತ ಮುರುಗೇಶ್ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ನೇರ ನೇಮಕಾತಿ ಮೂಲಕ 50 ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಈಗಾಗಲೇ ನೇರ ನೇಮಕಾತಿ ಮೂಲಕ ಆಯ್ಕೆಯಾದ 4 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಯಾವುದೇ ಪರಿಹಾರ ಸಿಗದ ಹಿನ್ನಲೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹುಣಸೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

Key words: duty is –civil- worker- death-mysore-protest