ಡಿ.ವಿ ಸದಾನಂದಗೌಡರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ- ಮಾಜಿ ಸಿಎಂ  ಬಿಎಸ್ ಯಡಿಯೂರಪ್ಪ.

ಬೆಂಗಳೂರು,ನವೆಂಬರ್,9,2023(www.justkannada.in): ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದು ಈ ನಡುವೆ ಮಾಜಿ ಸಿಎಂ ಡಿವಿ ಸದಾನಂದಗೌಡರು  ಹೈಕಮಾಂಡ್ ಸೂಚನೆಯಂತೆ ಚುನಾವಣೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸದಾನಂದಗೌಡರು ಚುನಾವಣೆಗೆ ಸ್ಪರ್ಧಿಸಲ್ಲ. ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಲಾಗಿದೆ. ಪಕ್ಷದಲ್ಲಿ ಸಕ್ರಿಯರಾಗಿರುವಂತೆ ಸದಾನಂದಗೌಡರಿಗೆ ಕೇಂದ್ರ ನಾಯಕರು ಸೂಚನೆ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

Key words: DV Sadananda Gowda – not contesting –elections-Former CM -BS Yeddyurappa.