Sunday, August 23, 2026

BDA Apartments

Home Front Page ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಳಿ ವಿಚಾರ: ಸಚಿವ ಜೆ.ಸಿ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.

ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಳಿ ವಿಚಾರ: ಸಚಿವ ಜೆ.ಸಿ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರು,ಆಗಸ್ಟ್,5,2021(www.justkannada.in):  ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಸುತ್ತೂರು ಮಠದಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಮಾಧುಸ್ವಾಮಿ, ಜಮೀರ್ ಗೆ ಬೇಕಾದಷ್ಟು ವ್ಯವಹಾರ ಇದೆ. ಅವರು ಬ್ಯೂಸಿನೆಸ್ ಕ್ಲಾಸ್ ಜನ. ಅವರೇನೂ ನನ್ನ ರೀತಿ ಹಳ್ಳಿಯಲ್ಲಿ ಇರುವ ಶಾಸಕರಾ..? ಐಟಿ, ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಅಂತಾ ಹೇಳೋದು ಸರಿಯಲ್ಲ. ಸಿದ್ದರಾಮಯ್ಯ ನಂತವರು ಈ ರೀತಿ ಹೇಳುವುದು ತಪ್ಪು ಎಂದು ತಿಳಿಸಿದರು.

ಹಾಗೆಯೇ ಕಾಂಗ್ರೆಸ್ ನವರು ಅವರ ಆಡಳಿತ ಕಾಲದಲ್ಲಿ ಐಟಿ- ಇಡಿ ಗಳನ್ನು ದುರುಪಯೋಗ ಪಡಿಸಿ ಕೊಂಡಿರಬಹುದು ಇವತ್ತು ಅದೇ ಆಗುತ್ತಿದೆ ಎಂದು ಅವರು ಅಂದು ಕೊಂಡಿದ್ದಾರೆ. ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ. ದಾಳಿಯೆ ತಪ್ಪು ಎಂದರೇ ಹೇಗೇ ಹೇಳಿ? ಸ್ವಾಯತ್ತ ಸಂಸ್ಥೆಗಳು ಅವರ ಕೆಲಸ ಅವರು ಮಾಡಬಾರದಾ? ಇದು ರಾಜಕೀಯ ದಾಳಿಯಲ್ಲ. ಲೆಕ್ಕದ ಅನುಮಾನ ಇದ್ದಾಗ ಪರಿಶೀಲನೆಗೆ ಬಂದಿರುತ್ತಾರೆ ಜಮೀರ್ ಲೆಕ್ಕ ಪತ್ರ ಸರಿ ಇಟ್ಟು ಕೊಂಡಿದ್ದಾರೆ ಅದನ್ನು ತೋರಿಸುತ್ತಾರೆ ಅಷ್ಟೆ. ಇದಕ್ಕೆ ಬೇರೆ ರೀತಿಯ ಬಣ್ಣ ಬೇಡ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

Key words: ED- attack-MLA- Jameer –residence-Minister -JC Madhuswamy