ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ನೋಟಿಸ್ : ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ.

ನವದೆಹಲಿ,ಜೂನ್,13,2022(www.justkannada.in): ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟೀಸ್ ನೀಡುರುವುದನ್ನ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಕಾಂಗ್ರೆಸ್ ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ,ಇದು ಸತ್ಯಕ್ಕಾಗಿ ನಡೆಯುತ್ತಿರುವ ಸತ್ಯಾಗ್ರಹ.  ಮೋದಿ ಸರ್ಕಾರ ಕಾಂಗ್ರಸ್ಸಿಗರನ್ನ ಬಂಧಿಸುತ್ತಿದೆ. ಯಾಕೆ ಸರ್ಕಾರಕ್ಕೆ ಭಯವೇ..? ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ಧ  ಎಂದು ಗುಡುಗಿದ್ದಾರೆ.

ಗಾಂಧೀಜಿ  ಕೊಂದವರಿಂದ ಗಾಂಧಿ ಇತಿಹಾಸ ಗೊತ್ತಾಗಲ್ಲ. ಕೇಂದ್ರ ಸಂಸ್ಥೆಗಳನ್ನ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಾವು ಶಾಂತಿಯುತ ಹೋರಾಟ ಮಾಡುತ್ತೇವೆ. ನಮ್ಮ ಹೋರಾಟದಿಂದ ಮೋದಿ ಸರ್ಕಾರಕ್ಕೆ ನಡುಕ ಶುರುವಾಗಿದೆ ಎಂದು ಕಿಡಿಕಾರಿದರು.

Key words: ED-notice -Sonia Gandhi – Rahul Gandhi-Congress-protests