Sunday, September 13, 2026

BDA Apartments

ಕಾಂಗ್ರೆಸ್ ಶಾಸಕನ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ BDA JK_Adv BDA Adv
Home Front Page ಕಾಂಗ್ರೆಸ್ ಶಾಸಕನ ಮನೆ  ಮತ್ತು ಕಚೇರಿ ಮೇಲೆ ಇಡಿ ದಾಳಿ.

ಕಾಂಗ್ರೆಸ್ ಶಾಸಕನ ಮನೆ  ಮತ್ತು ಕಚೇರಿ ಮೇಲೆ ಇಡಿ ದಾಳಿ.

ಕೋಲಾರ, ಜನವರಿ,8,2024(www.justkannada.in): ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ(ಕೋಚಿಮುಲ್)  ಅಧ್ಯಕ್ಷ ಹಾಗೂ  ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ​ನಲ್ಲಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಶಾಸಕನ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ed

ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ  ಆರೋಪ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ. ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್, ಕೋಚಿಮುಲ್​​ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್​ಮೂರ್ತಿ  ಮನೆ ಮೇಲೂ ಇಡಿ ಅಧಿಕಾರಿಗಳು  ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Key words: ED -raid – house -office – Congress- MLA.