Wednesday, September 9, 2026

BDA Apartments

Home Front Page ಶಾಸಕ ಬಿ.ನಾಗೇಂದ್ರ ಆಪ್ತರ ನಿವಾಸದ ಮೇಲೆ ED ದಾಳಿ, ಪರಿಶೀಲನೆ

ಶಾಸಕ ಬಿ.ನಾಗೇಂದ್ರ ಆಪ್ತರ ನಿವಾಸದ ಮೇಲೆ ED ದಾಳಿ, ಪರಿಶೀಲನೆ

ಬಳ್ಳಾರಿ,ಆಗಸ್ಟ್,28,2024 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಬಿ.ನಾಗೇಂದ್ರಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಶಾಕ್ ನೀಡಿದ್ದಾರೆ.

ಶಾಸಕ ಬಿ. ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ  ನಡೆಸಿ ದಾಖಲೆ  ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಆಪ್ತ ಎರ್ರಿ ಸ್ವಾಮಿ, ವಿಜಯ್ ಕುಮಾರ್  ಸೇರಿದಂತೆ ಹಲವು ಆಪ್ತರ ಮನೆ ಮೇಲೆ ಇಡಿ ದಾಳಿ ನಡೆಸಿದೆ ಎನ್ನಲಾಗಿದೆ. ಇಂದು ಮುಂಜಾನೆ ಇಡಿ ಅಧಿಕಾರಿಗಳು ಬಳ್ಳಾರಿಯ ಹಲವೆಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆಳಕಿಗೆ ಬಂದ ಬಳಿಕ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು. ನಂತರ   ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಬಿ. ನಾಗೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಬಿ.ನಾಗೇಂದ್ರ ಅವರನ್ನ ಬಂಧಿಸಿ ವಿಚಾರಣೆ ನಡೆಸಿತ್ತು.

Key words: ED, raid, MLA, B. Nagendra, intimate