ಬೆಂಗಳೂರು,ಅಕ್ಟೋಬರ್,6,2026 (www.justkannada.in): ಕೆಪಿಎಸ್ಸಿ ಪಶುವೈದ್ಯ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು,ಈ ನಡುವೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಕೆಪಿಎಸ್ ಸಿ ಸದಸ್ಯೆ ಗೀತಾ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಪರಿಶೀಲನೆ ನಡೆಸಿದ್ದಾರೆ.
ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಈಗಾಗಲೇ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅಮಾನತಾಗಿದ್ದಾರೆ.







