ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ, ಪರಿಶೀಲನೆ.

ಶಿವಮೊಗ್ಗ, ಜನವರಿ,2,2024(www.justkannada.in): ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ  ಜಾರಿ ನಿರ್ದೇಶನಾಲಯ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸಂಸ್ಥೆಯ ಹಣದ ವಿಚಾರದಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. .ಶಿವಮೊಗ್ಗ ಏರ್​​ಪೋರ್ಟ್​​ ಸೇರಿದಂತೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಸಾವಿರಾರು ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಮಾಡಿದ್ದಾರೆ. ಅದರಲ್ಲೂ ಹೈವೇ ಮತ್ತು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನೂ ಈ ಕಂಪನಿಯೇ ನಡೆಸುತ್ತಿದೆ.

Key words: ED raids – inspects – National Institute – working – Shimoga Airport.