Monday, August 3, 2026

BDA Apartments

Home Front Page ಜ.13 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ಸಮನ್ಸ್…

ಜ.13 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ಸಮನ್ಸ್…

ನವದೆಹಲಿ,ಜ,6,2020(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿಸಚಿವ ಡಿ.ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ದೆಹಲಿಗೆ ಆಗಮಿಸಿ ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ  ಇಡಿ ನೋಟೀಸ್ ನೀಡಿದೆ. 2013 ಮತ್ತು 2014ರಲ್ಲಿ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.

ಇಡಿ ಸಮನ್ಸ್ ಜಾರಿ ಹಿನ್ನೆಲೆ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನ ಭೇಟಿಯಾಗಲು ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ವಕೀಲರನ್ನ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದು  ಇಡಿ ವಿಚಾರಣೆ ಕುರಿತು ಚರ್ಚೆ ನಡೆಸಿದ್ದಾರೆ.

Key words: ED summons- former minister- DK Sivakumar – attend -hearing – Jan 13