ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ದತೆ ಹಿನ್ನೆಲೆ:  ಮೈಸೂರು ಜಿಲ್ಲೆಯ ಶಿಕ್ಷಕರಿಗೆ ಕೋವಿಡ್ ಟೆಸ್ಟ್

ಮೈಸೂರು,ಸೆಪ್ಟಂಬರ್,29,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಸಮುದಾಯಕ್ಕೆ ಹರಡಿದೆ. ನಗರ ಗ್ರಾಮೀಣ ಭಾಗಗಳಲ್ಲೂ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕಳೆದ ಆರು ತಿಂಗಳಿನಿಂದ ಬಂದ್ ಮಾಡಲಾಗಿರುವ ಶಾಲೆಗಳನ್ನ ಆರಂಭಿಸಲು ಇದೀಗ  ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮ ಮತ್ತು ಸಿದ್ಧತೆ ನಡೆಸುತ್ತಿದೆ.jk-logo-justkannada-logo

ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ‌ ತಯಾರಿ ಮಾಡಿಕೊಳ್ಳುತ್ತಿದ್ದು. ಈ ನಡುವೆ ಎಲ್ಲಾ ಶಿಕ್ಷಕರು ಕೊರೊನಾ ಪರೀಕ್ಷೆಗೊಳಪಡಬೇಕಿದೆ. ಹೀಗಾಗಿ ಮೈಸೂರು ಜಿಲ್ಲೆಯ ಶಿಕ್ಷಕರಿಗೆ ನಿನ್ನೆಯಿಂದಲೇ  ಕೊರೋನಾ ಪರೀಕ್ಷೆ ಆರಂಭವಾಗಿದೆ. ಮೈಸೂರು ಜಿಲ್ಲೆಯಲ್ಲಿ  ಮೂರು ಸಾವಿರಕ್ಕೂ ಹೆಚ್ಚು ಶಾಲೆಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಶಿಕ್ಷಕರಿದ್ದು ಇದೀಗ ಎಲ್ಲಾ ಶಿಕ್ಷಕರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.education-department-start-schools-kovid-test-teachers-mysore-district

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೊರೋನಾ ಟೆಸ್ಟ್ ಪ್ರಾರಂಭವಾಗಿದ್ದು, ಮೈಸೂರಿನ ಶಿಕ್ಷಕರ ಭವನದಲ್ಲಿ ಕೊರೋನಾ ಪರೀಕ್ಷೆ ನಡೆಯುತ್ತಿದ್ದು, ಜಿಲ್ಲೆಯ ಆಯಾ ತಾಲ್ಲೂಕಿನ ಕೇಂದ್ರಗಳಲ್ಲು ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Education Department –start- schools-covid test – teachers -Mysore district