ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ 100 ರೂ . ದೇಣಿಗೆ ಸಂಗ್ರಹ ಆದೇಶ ಹಿಂಪಡೆದ ಶಿಕ್ಷಣ ಇಲಾಖೆ.

ಬೆಂಗಳೂರು,ಅಕ್ಟೋಬರ್,22,2022(www.justkannada.in): ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಅವಕಾಶ ನೀಡಿ ಹೊರಡಿಸಿದ್ಧ ಆದೇಶವನ್ನ ಶಿಕ್ಷಣ ಇಲಾಖೆ ಹಿಂಪಡೆದಿದೆ.

ಶಿಕ್ಷಣ ಇಲಾಖೆಯ ಈ ಸುತ್ತೋಲೆಗೆ ಸಾಕ್ಷ್ಟು ಆಕ್ಷೇಪ ವಿರೋಧಗಳು ವ್ಯಕ್ತವಾಗಿದ್ದು ಇದೀಗ ಎಚ್ಚೆತ್ತ ಶಿಕ್ಷಣ ಇಲಾಖೆ, ಶಾಲಾ ಮಕ್ಕಳ ಪೋಷಕರಿಂದ 100 ರೂ ದೇಣಿಗೆ ಸಂಗ್ರಹ ಸುತ್ತೋಲೆಯನ್ನ ವಾಪಸ್ ಪಡೆದಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿತ್ತು.

ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್​ಡಿಎಮ್​ಸಿಗಳಿಗೆ ಅವಕಾಶ ನೀಡಿ  ಆದೇಶಿಸಿತ್ತು.

Key words: Education Department – withdrawn – order –collect- Rs 100 donation-schools.