ರಾಷ್ಟ್ರಕವಿ ಕುವೆಂಪುಗೆ ಅಪಮಾನ ಆರೋಪ ತಳ್ಳಿ ಹಾಕಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಬೆಂಗಳೂರು,ಮೇ,23,2022(www.justkannada.in):  4ನೇ ತರಗತಿ ಪಠ್ಯ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಶಿಕ್ಷಣ ಇಲಾಖೆ ಅಪಮಾನ ಮಾಡಿದ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ 4ನೇ ತರಗತಿ ಪರಿಸರ ಅಧ್ಯಯನ ಪಠ್ಯ ಪರಿಷ್ಕರಣೆ ಮಾಡಿಲ್ಲ. ಆದರೆ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.   ಕುವೆಂಪು ಬಗ್ಗೆ ಎಷ್ಟು ಪಠ್ಯ ಸೇರಿಸಿದ್ದೇವೆ ನೋಡಲಿ.    ನಾವು ಕುವೆಂಪು ಬಗ್ಗೆ ಹೆಚ್ಚು ಪಠ್ಯ ಸೇರಿಸಿದ್ದೇವೆ. ಶಿಕ್ಷಣ ಇಲಾಖೆ ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದರು.

Key words: Education Minister-BC Nagesh- Kuvempu