ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ: ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನಿಂಗ್.

ಶಿವಮೊಗ್ಗ,ಡಿಸೆಂಬರ್,28,2023(www.justkannada.in): ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಈ  ಅಮಾನವೀಯ ಘಟನೆ  ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೆಡ್ ಮಾಸ್ಟರ್ ಶಂಕರಪ್ಪ, ಸಹಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಎಸಿಗೆ ದಲಿತ ಸಂಘರ್ಷ ಸಮಿತಿ  ದೂರು ನೀಡಿದೆ.

Key words education -minister- home- district-Toilet cleaning- by- children -school.