ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ

ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ ಸ್ವರೂಪದ ಬಗ್ಗೆ ಸ್ಪಷ್ಟತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಗ್ರಹಿಸಿದೆ.

ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕ ಸುನೀಲ್ ಕುಮಾರ್, ಸಂಸದ ಪಿಸಿ ಮೋಹನ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, , ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ಎಂ. ಡಿ. ಲಕ್ಷ್ಮೀನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Key words: Educational and Social Survey,  BJP, met , Backward Classes Commission