ಮೊಟ್ಟೆ ಎಸೆದ ವ್ಯಕ್ತಿ ‘ಕೈ’ ಕಾರ್ಯಕರ್ತನಾಗಿದ್ರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಯಾಕೆ ಬಿಡಿಸಬೇಕಿತ್ತು-ಸಿದ್ಧರಾಮಯ್ಯ.

ಬೆಂಗಳೂರು,ಆಗಸ್ಟ್,20,2022(www.justkannada.in):  ಕಾರಿಗೆ ಮೊಟ್ಟ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೇ ಆತನನ್ನ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಯಾಕೆ ಬಿಡಿಸಬೇಕಿತ್ತು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿ ಕಾಂಗ್ರೆಸ್ ತರಾಟೆ ತೆಗೆದುಕೊಂಡಿರುವ ಸಿದ್ಧರಾಮಯ್ಯ,  ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ  @BJP4Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಎಂದು ಪ್ರಶ್ನಿಸಿದ್ದಾರೆ.

‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ  @BJP4Karnataka ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ  @BJP4Karnataka ? ಎಂದು ಸಿದ್ಧರಾಮಯ್ಯ ಚಾಟಿ ಬೀಸಿದ್ದಾರೆ.

Key words: egg –car-congress-activist-formerCM -Siddaramaiah.