ಗಡಿ ವಿವಾದ ಕುರಿತಂತೆ ಜನರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಗಡಿ ವಿವಾದ ಕುರಿತಂತೆ ಜನರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಮಹಾರಾಷ್ಟ್ರದ ಜನರಿಗೆ ಯಾವುದೇ ಸಮಸ್ಯೆ ಎದುರಾಗಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ. ಇದೆಲ್ಲವೂ ಕೇಂದ್ರ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿದಿದೆ ಎಂದಿದ್ದಾರೆ.