Sunday, August 9, 2026

BDA Apartments

Home Front Page ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರ ಮೇಲೆ ಒತ್ತಡ ಇಲ್ಲದಂತೆ ಮತದಾನ- ಡಿ.ಕೆ ಶಿವಕುಮಾರ್.

ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರ ಮೇಲೆ ಒತ್ತಡ ಇಲ್ಲದಂತೆ ಮತದಾನ- ಡಿ.ಕೆ ಶಿವಕುಮಾರ್.

ಬೆಂಗಳೂರು,ಅಕ್ಟೋಬರ್,17,2022(www.justkannada.in):  ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ  ಕಾಂಗ್ರೆಸ್ ಸಂಸದ ಶಶಿ ತರೂರ್ ಕಣದಲ್ಲಿದ್ದಾರೆ. ಈ ಬಾರಿ ಯಾರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಚುನಾವಣೆ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ಪ್ರಜಾಪ್ರಭುತ್ವದಲ್ಲಿ ಚುನಾವಣೆ ನಡೆಯುತ್ತಿದೆ.  ಚುನಾವಣೆಯಲ್ಲಿ ಹಿರಿಯ ನಾಯಕರು ಕಣದಲ್ಲಿದ್ದು ಯಾರ ಮೇಲೆ ಒತ್ತಡ ಇಲ್ಲದಂತೆ ಮತದಾನ ನಡೆಯಲಿದೆ. ಕರ್ನಾಟಕಕ್ಕೆ ಇದು ಒಳ್ಳೆಯದಾಗಲಿದೆ ಎಂದರು.

ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು,ಬಳ್ಳಾರಿಯಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮತ ಚಲಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Election – AICC –President- today.