ಇದು ಎಲೆಕ್ಷನ್ ಬಜೆಟ್: ಚುನಾವಣೆ ಗುರಿಯಾಗಿಟ್ಟು ಮಂಡನೆ- ಡಿ.ಕೆ ಶಿವಕುಮಾರ್.

ಬೆಂಗಳೂರು,ಫೆಬ್ರವರಿ,1,2023(www.justkannada.in): ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್ , ಇದು ಎಲೆಕ್ಷನ್ ಬಜೆಟ್. ಮುಂದಿನ ಚುನಾವಣೆ ಗುರಿಯಾಗಿಟ್ಟುಕೊಂಡು ಬಜೆಟ್ ಮಂಡನೆ  ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳ ಬಗ್ಗೆಯಾದರೂ ಹೇಳಬೇಕಿತ್ತು. ನಾವು ಲೆಕ್ಕಚಾರ ಹಾಕಿ ಪ್ರಣಾಳಿಕೆಯನ್ನ ಸಿದ್ದಪಡಿಸಿದ್ದೇವೆ ಎಂದರು.

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಯಾಕೆ ಇನ್ನೂ ಕಾಮಗಾರಿ ಆರಂಭ ಮಾಡಿಲ್ಲ. ಬರೀ ಭರವಸೆಗಳ ಮೇಲೆ ಸರ್ಕಾರ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ತಮ್ಮ ವಿರುದ್ದ ರಮೇಶ್ ಜಾರಕಿಹೊಳಿ ಆಡಿಯೋ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಸಚಿವ ಸ್ಥಾನ ಸಿಗದಿದ್ದಕ್ಕೆ ರಮೇಶ್ ಹತಾಶರಾಗಿದ್ದಾರೆ. ರಮೇಶ್ ಜಾರಕಿಹೊಳಿ ಮಾತುಗಳನ್ನ ಕೇಳಿದರೇ ಅಯ್ಯೋ ಅನ್ನಿಸುತ್ತೆ. ತನಿಖೆ ಮಾಡಿಸಲು ರಮೇಶ್ ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ ಯಾವ ತನಿಖೆಯನ್ನಾದರೂ ಮಾಡಿಸಲಿ ಎಂದರು.

Key words: election- budget-KPCC-President-DK Shivakumar.