ಆರು ರಾಜ್ಯಗಳ ಗೃಹ ಕಾರ್ಯದರ್ಶಿ ಮತ್ತು ಓರ್ವ ಡಿಜಿ ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ.

ನವದೆಹಲಿ,ಮಾರ್ಚ್,18,2024(www.justkannada.in): ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಈ ಮಧ್ಯೆ ಚುನಾವಣಾ ಆಯೋಗ ಆರು ರಾಜ್ಯಗಳ ಗೃಹ ಕಾರ್ಯದರ್ಶಿ ಮತ್ತು ಒಂದು ರಾಜ್ಯದ  ಡಿಜಿಯನ್ನ ವರ್ಗಾವಣೆಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಯನ್ನ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಇದಲ್ಲದೆ, ಇನ್ನು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನ (DGP) ವರ್ಗಾವಣೆ ಮಾಡಲಾಗಿದೆ. ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನ ಸಹ ವಜಾಗೊಳಿಸಲಾಗಿದೆ ಎನ್ನಲಾಗಿದೆ.

ಸಿಇಸಿ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಸಮಿತಿಯು ಬೃಹನ್ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹೆಚ್ಚುವರಿ ಆಯುಕ್ತರು ಮತ್ತು ಡೆಪ್ಯುಟಿ ಕಮಿಷನರ್‌ಗಳನ್ನು ವಜಾಗೊಳಿಸುವಂತೆ ಆದೇಶಿಸಿತು. ಈ ಹಿಂದೆ ಮೂರು ವರ್ಷ ಪೂರೈಸಿರುವ ಅಥವಾ ಅವರ ತವರು ಜಿಲ್ಲೆಯಲ್ಲಿರುವ ಚುನಾವಣಾ ಸಂಬಂಧಿತ ಕೆಲಸಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.

Key words:  Election Commission –transferred- six states- home secretary – DG.