Saturday, August 1, 2026

BDA Apartments

Home Front Page ನಾಳೆಯೇ ಚುನಾವಣೆ ಘೋಷಣೆಯಾದ್ರೆ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್.

ನಾಳೆಯೇ ಚುನಾವಣೆ ಘೋಷಣೆಯಾದ್ರೆ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್.

ಬೆಂಗಳೂರು,ಡಿಸೆಂಬರ್,29,2022(www.justkannada.in): ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್,  ನಾಳೆಯೇ ಚುನಾವಾಣೆ  ಘೋಷಿಸಿದರೇ ನಾಡಿದ್ಧೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ.  ಮರುದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತೆ. ನಾವು ವಿಧಾನಸಭಾ ಚುನಾವಣೆಗೆ ರೆಡಿಯಾಗುತ್ತಿದ್ದೇವೆ. ಅವಧಿಪೂರ್ವ ಚುನಾವಣೆ  ನಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.

ಕಾಂಗ್ರೆಸ್ ಇತಿಹಾಸದಲ್ಲೇ ಅಭ್ಯರ್ಥಿ ಇಲ್ಲ ಎಂಬ ಮಾತಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಐವರ ನಡುವೆ ಸ್ಪರ್ಧೆ ಇದೆ. ಟಿಕೆಟ್  ಆಕಾಂಕ್ಷಿಗಳು 2 ಲಕ್ಷ ರೂ. ನೀಡಿದ್ದಾರೆ. ಇದರಿಂದ ಪಕ್ಷಕ್ಕೆ  20 ರಿಂದ 25 ಕೋಟಿ ಸಂಗ್ರಹವಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: election – Congress -candidates -list – release-Former DCM -Dr. G. Parameshwar.