ಫೆ.17 ರಂದು ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಲಕ್ಷ್ಮಣ್ ಸವದಿ…

ಬೆಂಗಳೂರು,ಫೆ,7,2020(www.justkannada.in): ಫೆಬ್ರವರಿ 17 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದರು.

ಶಾಸಕ ರಿಜ್ವಾನ್ ಅರ್ಷಾದ್ ರಿಂದ ತೆರವಾಗಿರುವ ವಿಧಾನಪರಿಷತ್ ಒಂದು ಸ್ಥಾನಕ್ಕೆ ಫೆಬ್ರವರಿ 17 ರಂದು ಚುನಾವಣೆ ನಡೆಯಲಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನ ಕಣಕ್ಕಿಳಿಸಲಾಗಿದೆ. ಇದರಿಂದಾಗಿ  ಅವಿರೋಧ ಆಯ್ಕೆಯ ನಿರೀಕ್ಷೆ ಡಿಸಿಎಂ ಲಕ್ಷ್ಮಣ್ ಸವದಿಗೆ ಟೆನ್ಷನ್ ಶುರುವಾಗಿದೆ.

ಹೀಗಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಬೀದರ್ ಗೆ ತೆರಳುವ ಮುನ್ನ ಡಿಸಿಎಂ ಲಕ್ಷ್ಮಣ್ ಸವದಿ ಭೇಟಿಯಾಗಿ ಪರಿಷತ್ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Key words: election – February 17- DCM -Laxman Sawadi- met –discussed- CM BSY.