ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ- ಸಿಎಂ ಬಸವರಾಜ ಬೊಮ್ಮಾಯಿ.

ಧಾರವಾಡ,ಮೇ,2,2023(www.justkannada.in): ಚುನಾವಣೆ ಬಳಿಕ ಮಹದಾಯಿ ಯೋಜನೆ ಕಾಮಗಾರಿ ಆರಂಭ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಮುನೇನಕೊಪ್ಪ ಪರ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿ  ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಯ ಹೋರಾಟಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿತ್ತು. ಮಹದಾಯಿ ಹೋರಾಟಗಾರರ ಮೇಲೆ ಕಾಂಗ್ರೆಸ್​​ ಗುಂಡು ಹಾರಿಸಿತ್ತು, ಹೋರಾಟಗಾರರ ಮೇಲೆ ಲಾಠಿಚಾರ್ಜ್​ ಮಾಡಿಸಿದ್ದು ಕೂಡ ಇದೇ ಕಾಂಗ್ರೆಸ್ ಎಂದು ಆರೋಪಿಸಿದರು.

ಹೀಗಾಗಿ ಇಂತಹ ಪಕ್ಷಕ್ಕೆ ನೀವು ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮಹದಾಯಿ ಯೋಜನೆಗೆ ಡಿಪಿಆರ್ ​​ಗೆ ಮೋದಿ ಸರ್ಕಾರ ಅನುಮತಿ ನೀಡಿದೆ. ಮಹದಾಯಿ ಯೋಜನೆಗೆ ಟೆಂಡರ್​ ಕೂಡ ಮಾಡಿದ್ದೇವೆ. ಚುನಾವಣೆ ಬಳಿಕ ಯೋಜನೆಯ ಕಾಮಗಾರಿ ಆರಂಭವಾಗಲಿದೆ ಎಂದರು.

Key words: election- Mahadayi- Yojana – work – started- CM Basavaraja Bommai.