Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ: ಕಣದಲ್ಲಿ 29 ಅಭ್ಯರ್ಥಿಗಳು

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ: ಕಣದಲ್ಲಿ 29 ಅಭ್ಯರ್ಥಿಗಳು

ಮೈಸೂರು,ಜೂನ್,26,2025 (www.justkannada.in): ಇಂದು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದ ವೋಟಿಂಗ್ ಆರಂಭವಾಗಿದೆ. ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು ಸಂಜೆ 5 ಗಂಟೆಗೆ  ಮತ ಎಣಿಕೆ ಕಾರ್ಯ ನಡೆದು ಸಂಜೆ 7 ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ನಿರ್ದೇಶಕ ಸ್ಥಾನಗಳಿಗೆ ಶಾಸಕರಾದ ಅನಿಲ್ ಚಿಕ್ಕಮಾಧು, ಜಿ.ಡಿ ಹರೀಶ್ ಗೌಡ, ಗಣೇಶ್ ಪ್ರಸಾದ್ ಮತ್ತು ಪುಟ್ಟರಂಗಶೆಟ್ಟಿ ಸ್ಪರ್ಧಿಸಿದ್ದಾರೆ. ಮೈಸೂರು, ನಂಜನಗೂಡು, ಟಿ.ನರಸಿಪುರ, ಹುಣಸೂರು, ಎಚ್.ಡಿ ಕೋಟೆ, ಕೆಆರ್ ನಗರ, ಪಿರಿಯಾಪಟ್ಟಣ, ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೆಗಾಲ ಸೇರಿದಂತೆ ಒಟ್ಟು 12 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.vtu

Key words: Election, MCDCC Bank, director, 29 candidates, Mysore