ನ.10ರೊಳಗೆ ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ –ಉಪಾಧ್ಯಕ್ಷರ ಚುನಾವಣೆ: ನಿಯಮಾನುಸಾರ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸೂಚನೆ…

ಬೆಂಗಳೂರು,ಅಕ್ಟೋಬರ್,23,2020(www.justkannada.in): ನವೆಂಬರ್ 10ರೊಳಗೆ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರ – ಉಪಾಧ್ಯಕ್ಷರ ಸ್ಥಾನದ ಚುನಾವಣೆ ನಡೆಸುವಂತೆ  ಹೈಕೋರ್ಟ್  ಆದೇಶ ನೀಡಿರುವ ಹಿನ್ನೆಲೆ, ಚುನಾವಣೆ ನಡೆಸಲು ನಿಯಮಾನುಸಾರ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯದ ಎಲ್ಲಾ ಡಿಸಿಗಳು, ಉಭವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ,  ರಾಜ್ಯದ ಎಲ್ಲಾ ಡಿಸಿಗಳು, ಉಭವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್  ಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.election-muncipality-town-panchayath-president-vice-president-election-nov-10

election-muncipality-town-panchayath-president-vice-president-election-nov-10

ರಾಜ್ಯದ 118 ಪುರಸಭೆ ಮತ್ತು 110 ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ನಿನ್ನೆಯಷ್ಟೆ  ಹೈಕೋರ್ಟ್  ಗ್ರೀನ್ ಸಿಗ್ನಲ್ ನೀಡಿದೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ  ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಅ.8 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ  ಅಧಿಸೂಚನೆಗೆ ಅಕ್ಟೋಬರ್ 19 ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ನಿನ್ನೆ ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ಆದೇಶವನ್ನು ಹಿಂಪಡೆದು ನವೆಂಬರ್ 10ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.election-muncipality-town-panchayath-president-vice-president-election-nov-10

ಈ ಹಿನ್ನೆಲೆಯಲ್ಲಿ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನವೆಂಬರ್ 10ರೊಳಗೆ ಚುನಾವಣೆ ನಡೆಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯದ ಎಲ್ಲಾ ಡಿಸಿಗಳು, ಉಭವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ  ಸೂಚನೆ ನೀಡಿದ್ದಾರೆ.

Key words: Election –muncipality- Town Panchayath- president-Vice President-election-nov 10