ಕೇಂದ್ರದ ವೀಕ್ಷಕರ ತಂಡ ಭೇಟಿ ಬಳಿಕ ವಿಪಕ್ಷ ನಾಯಕರ ಆಯ್ಕೆ- ಮಾಜಿ ಸಚಿವ ಆರ್.ಅಶೋಕ್.

ಬೆಂಗಳೂರು,ಮೇ,22,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮುಗಿದು, ಸಿಎಂ ಆಗಿ ಸಿದ್ಧರಾಮಯ್ಯ ಮತ್ತು ಡಿಸಿಎಂ ಆಗಿ ಡಿ.ಕೆ ಶಿವಕುಮಾರ್  ಪ್ರಮಾಣ ವಚನ ಸ್ವೀಕರಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ರಾಜ್ಯ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದು ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.  ಈ ನಡುವೆ ವಿಪಕ್ಷ ನಾಯಕರ ಆಯ್ಕೆ ಯಾವಾಗ ಎಂಬ ಪ್ರಶ್ನೆಗೆ ಮಾಜಿ ಸಚಿವ ಆರ್.ಅಶೋಕ್ ಉತ್ತರ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ಕೇಂದ್ರದ ವೀಕ್ಷಕರ ತಂಡ ಬಂದ ಬಳಿಕ ವಿಪಕ್ಷ ನಾಯಕರ ಆಯ್ಕೆಯಾಗಲಿದೆ  ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಅವಾಂತರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಬೆಂಗಳೂರು ನಗರದಲ್ಲಿ ಮಳೆಗೆ ನಿನ್ನೆ ಒಬ್ಬರು ಮೃತಪಟ್ಟಿದ್ದಾರೆ. ಸಿಎಂ ಕೂಡಲೇ ಅಧಿಕಾರಿಗಳ ಸಭೆ ಕರೆದು ಸೂಚನೆ ಕೊಡಬೇಕು. ಮಳೆಯಿಂದ ಹಾನಿಯಾದ ಕಡೆ ಕೂಡಲೇ ಪರಿಹಾರ ಕೊಡಬೇಕು. ಕಂದಾಯ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು  ಎಂದು ಆಗ್ರಹಿಸಿದರು.

Key words: Election- opposition leaders- after – meeting – observer team – former minister -R. Ashok.