ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನರಿಗೆ ಮಾಜಿ ಸಿಎಂ ಹೆಚ್.ಡಿಕೆ ಕೃತಜ್ಞತೆ..

ಬೆಂಗಳೂರು,ಏಪ್ರಿಲ್,30,2021(www.justkannada.in): ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನತೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.election-people-state-supported-jds-party-former-cm-hd-kumaraswamy-thanked

ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ನನ್ನ ಮನದಾಳದ ಕೃತಜ್ಞತೆಗಳು.election -people -state - supported - JDS party- Former CM -HD Kumaraswamy-thanked

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ, ಜೆಡಿಎಸ್ ಪಕ್ಷದ ವಿರುದ್ಧ  ಮಾಡಿದ ಅಪಪ್ರಚಾರಗಳ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಕೈ ಹಿಡಿದ ಜನತೆ ಗೌರವಯುತ ತೀರ್ಪು ನೀಡಿರುವುದನ್ನು ಗೌರವಿಸುತ್ತೇನೆ ಎಂದು ಹೆಚ್.ಡಿಕೆ ಟ್ವಿಟ್ ಮಾಡಿದ್ದಾರೆ.

Key words: election -people -state – supported – JDS party- Former CM -HD Kumaraswamy-thanked